ಬೆಂಗಳೂರು: ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS Recruitment 2025) 208 ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಜುಲೈ 21 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಸಂಬಳ ಎಷ್ಟು ಎಂಬುದರ ಮಾಹಿತಿ ಇಲ್ಲಿದೆ.
ಆಸಕ್ತ ಅಭ್ಯರ್ಥಿಗಳು ibps.in. ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ದೇಶದ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕನಿಷ್ಠ 20 ಹಾಗೂ ಗರಿಷ್ಠ 30 ವರ್ಷದ ವಯೋಮಿತಿಯನ್ನು ಐಬಿಪಿಎಸ್ ನಿಗದಿಪಡಿಸಿದೆ.
ಪ್ರಮುಖ ದಿನಾಂಕಗಳು
ಅಧಿಸೂಚನೆ: ಜೂನ್ 30
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜುಲೈ 21
ಪೂರ್ವಭಾವಿ ಪರೀಕ್ಷೆ: ಆಗಸ್ಟ್ 17, 23, 24
ಮುಖ್ಯ ಪರೀಕ್ಷೆ: ಅಕ್ಟೋಬರ್ 10
ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಮಾಸಿಕ 74 ಸಾವಿರ ರೂಪಾಯಿಯಿಂದ 76 ಸಾವಿರ ರೂಪಾಯಿ ವೇತನ ನೀಡಲಾಗುತ್ತದೆ. ಜೂನ್ 30ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಜನರಲ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 850 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿಯವರು 175 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.