ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ, ಅದರಲ್ಲೂ ಗ್ರಾಮೀಣ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ಹೌದು, ಪ್ರಾದೇಶಿಕ ಗ್ರಾಮೀಣ ಭ್ಯಾಂಕ್ ಗಳಲ್ಲಿ (IBPS RRB Recruitment 2025) ಖಾಲಿ ಇರುವ 13,217 ಹುದ್ದೆಗಳ ನೇಮಕಾತಿಗಾಗಿ ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಅಧಿಸೂಚನೆ ಹೊರಡಿಸಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS)
ಹುದ್ದೆಗಳ ಹೆಸರು: ಆಫೀಸ್ ಅಸಿಸ್ಟಂಟ್, ಆಫೀಸರ್ಸ್
ಒಟ್ಟು ಹುದ್ದೆಗಳು: 13,217
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 21
ಉದ್ಯೋಗ ಸ್ಥಳ: ದೇಶಾದ್ಯಂತ
ಕರ್ನಾಟಕದಲ್ಲಿ 1,425 ಹುದ್ದೆಗಳು ಖಾಲಿ ಇವೆ. ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ, ಮಂಗಳೂರು ಮತ್ತು ಉಡುಪಿ ಜಿಲ್ಲಾಕೇಂದ್ರಗಳಲ್ಲಿಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ರಾಜ್ಯದಲ್ಲಿ ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಧಾರವಾಡದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕುಗಳು ವಿಲೀನಗೊಂಡು ಈಗ ಕರ್ನಾಟಕ ಗ್ರಾಮೀಣ ಬ್ಯಾಂಕ್ ಎಂದಾಗಿದೆ. ಇದರ ಪ್ರಧಾನ ಕಚೇರಿ ಬಳ್ಳಾರಿಯಲ್ಲಿದೆ.
ಯಾವುದೇ ವಿಷಯದಲ್ಲಿ ಪದವಿ, ಎಲ್ ಎಲ್ ಬಿ, ಡಿಪ್ಲೋಮಾ, ಸಿಎ, ಎಂಬಿಎ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. 18ರಿಂದ 40 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 175 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ 850 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವವರು ibps.in. ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.