ಬೆಂಗಳೂರು : ಕೇಂದ್ರ ಸರ್ಕಾರದ ಸ್ವಾಯತ್ತ ಸಂಸ್ಥೆಯಾದ ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯಲ್ಲಿ (ICAI Recruitment 2026) ಖಾಲಿ ಇರುವ 129 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ದೇಶಾದ್ಯಂತ ಇರುವ ಸಂಸ್ಥೆಗಳಲ್ಲಿ ಬ್ರ್ಯಾಂಚ್ ಇನ್-ಚಾರ್ಜ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ
ಹುದ್ದೆಗಳ ಹೆಸರು: ಬ್ರ್ಯಾಂಚ್ ಇನ್-ಚಾರ್ಜ್
ಒಟ್ಟು ಹುದ್ದೆಗಳು: 129
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 19
ಸೆಂಟ್ರಲ್ ಇಂಡಿಯಾ ರೀಜನಲ್ ಕೌನ್ಸಿಲ್, ಸದರ್ನ್ ಇಂಡಿಯಾ ರೀಜನಲ್ ಕೌನ್ಸಿಲ್ ಸೇರಿ 5 ವಲಯಗಳಲ್ಲಿ ನೇಮಕಾತಿ ನಡೆಯುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರತಿಯೊಬ್ಬರಿಗೆ 250 ರೂಪಾಯಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 27 ವರ್ಷದಿಂದ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ವರ್ಷಕ್ಕೆ 4.10 ಲಕ್ಷ ರೂಪಾಯಿಯಿಂದ 7.45 ಲಕ್ಷ ರೂಪಾಯಿವರೆಗೆ ಸಂಬಳದ ಪ್ಯಾಕೇಜ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ icai.org ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು
ಇದನ್ನೂ ಓದಿ : ಎಂ.ಫಿಲ್ ಮುಗಿಸಿದವರಿಗೆ ಶುಭ ಸಮಾಚಾರ : ಬೆಂಗಳೂರಿನ IISc ಸಂಸ್ಥೆಯಲ್ಲಿ ನೇಮಕಾತಿ



















