ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ವ್ಯಾಪ್ತಿಗೆ ಬರುವ ರಾಷ್ಟ್ರೀಯ ಬೀಜ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ (ICAR-NISST Recruitment 2026)ದಲ್ಲಿ ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 3 ಯಂಗ್ ಪ್ರೊಫೇಷನಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಬೀಜವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ (ICAR-NISST)
ಹುದ್ದೆಗಳ ಹೆಸರು: ಯಂಗ್ ಪ್ರೊಫೇಷನಲ್
ಒಟ್ಟು ಹುದ್ದೆಗಳು: 03
ಅರ್ಜಿ ಸಲ್ಲಿಕೆ ವಿಧಾನ: ಇ-ಮೇಲ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 1
ಕರ್ನಾಟಕದ ಬೆಂಗಳೂರಿನಲ್ಲೇ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಎಸ್ಸಿ ಪದವಿ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 45 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ seedicar.org.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿ ಹಾಗೂ ದಾಖಲೆಗಳ ಸಾಫ್ಟ್ ಕಾಪಿಗಳನ್ನು iissrsblrhead@gmail.com ಗೆ ಮೇಲ್ ಮಾಡಬೇಕು
ಇದನ್ನೂ ಓದಿ : ದೇಶದ ಅಂಚೆ ಇಲಾಖೆಯಲ್ಲಿ 4 ಹುದ್ದೆಗಳ ನೇಮಕಾತಿ : 63 ಸಾವಿರ ರೂಪಾಯಿ ಸ್ಯಾಲರಿ



















