ನವದೆಹಲಿ: ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಐಸಿಸಿ (ICC ODI Rankings) ಪ್ರಕಟಿಸಿದ ಏಕದಿನ ಕ್ರಿಕಟಿಗರ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಅಗ್ರ ಐದರೊಳಗೆ ಎಂಟ್ರಿಯಾಗಿದ್ದಾರೆ. ಅದಕ್ಕೆ ಕಾರಣ ಪಾಕಿಸ್ತಾನ ವಿರುದ್ಧದ ಅಮೋಘ ಶತಕ. ನ್ಯೂಜಿಲೆಂಡ್ ತಂಡದ ಬ್ಯಾಟ್ಸ್‌ಮನ್ ಡ್ಯಾರಿಲ್ ಮಿಚೆಲ್ ಅವರನ್ನು ಹಿಂದಿಕ್ಕಿ ವಿರಾಟ್ ಕೊಹ್ಲಿ ಐದನೇ ಸ್ಥಾನಕ್ಕೆ ಏರಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಟೂರ್ನಿಗೂ ಮುನ್ನ ಕೊಹ್ಲಿ 6ನೇ ಸ್ಥಾನದಲ್ಲಿದ್ದ ವಿರುದ್ಧದ ಪಂದ್ಯದಲ್ಲಿ ಫಾರ್ಮ್‌ಗೆ ಮರಳುವ ಮೂಲಕ ಶ್ರೇಯಾಂಕ ಹೆಚ್ಚಿಸಿಕೊಂಡಿದ್ದಾರೆ.
ಅಗ್ರ ಸ್ಥಾನದಲ್ಲಿಯೇ ಉಳಿದ ಗಿಲ್
ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ 46 ರನ್ ಗಳಿಸಿದ್ದ ಶುಭ್‌ಮನ್ ಗಿಲ್ ಐಸಿಸಿ ಒಡಿಐ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಪಾಕ್ ತಂಡ ಬಾಬರ್ ಆಝಮ್ ಎರಡನೇ ಸ್ಥಾನದಲ್ಲಿಯೇ ಉಳಿದಿದ್ದಾರೆ. ಶುಭಮನ್ ಗಿಲ್ 817 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದಾರೆ. ಬಾಬರ್ ಆಝಮ್‌ಗಿಂತ ಗಿಲ್ 47 ಹೆಚ್ಚು ಅಂಕಗಳನ್ನು ಹೊಂದಿದ್ದಾರೆ. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ನಾಲ್ಕನೇ ಸ್ಥಾನದಲ್ಲಿದ್ದಾರೆ. ಇದೀಗ ಅಗ್ರ ಐದರಲ್ಲಿ ಭಾರತದ ಮೂರು ಮಂದಿ ಬ್ಯಾಟ್ಸ್‌ಮನ್‌ಗಳು ಕಾಣಿಸಿಕೊಂಡಿದ್ದಾರೆ.
ಐಸಿಸಿ ಒಡಿಐ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದ ಅಗ್ರ ಐವರು
ಶುಭಮನ್ ಗಿಲ್ (ಭಾರತ) – 817 ಅಂಕಗಳು
ಬಾಬರ್ ಅಜಮ್ (ಪಾಕಿಸ್ತಾನ) – 757 ಅಂಕಗಳು
ರೋಹಿತ್ ಶರ್ಮಾ (ಭಾರತ) – 757 ಅಂಕಗಳು
ಹೆನ್ರಿಚ್ ಕ್ಲಾಸೆನ್ (ದಕ್ಷಿಣ ಆಫ್ರಿಕಾ) – 743 ಅಂಕಗಳು
ವಿರಾಟ್ ಕೊಹ್ಲಿ (ಭಾರತ) – 743 ಅಂಕಗಳು
ಇನ್ನು ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ 679 ಅಂಕಗಳೊಂದಿಗೆ 9ನೇ ಸ್ಥಾನಕ್ಕೆ ಏರಿದ್ದರೆ, ಕೆಎಲ್ ರಾಹುಲ್ 627 ಅಂಕಗಳನ್ನು ಕಲೆ ಹಾಕಿ 15ನೇ ಸ್ಥಾನದಲ್ಲಿದ್ದಾರೆ. ಆರಂಭಿಕ ಎರಡೂ ಪಂದ್ಯಗಳಲ್ಲಿ ಗೆಲುವು ಪಡೆದಿರುವ ಭಾರತ ತಂಡ, ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಸೆಮಿಫೈನಲ್‌ಗೆ ಅಧಿಕೃತವಾಗಿ ಪ್ರವೇಶ ಮಾಡಿದೆ. ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಪಂದ್ಯ ಮಾರ್ಚ್ 2 ರಂದು ನಡೆಯಲಿದೆ.