ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ, ಬೆಂಗಳೂರಿನಲ್ಲೇ ಇರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ICMR NINE Young Professional II Recruitment 2026) ಅಂಗಸಂಸ್ಥೆಯಲ್ಲಿ ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 2 ಯಂಗ್ ಪ್ರೊಫೇಷನಲ್ II ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ NINE
ಹುದ್ದೆ ಹೆಸರು: ಯಂಗ್ ಪ್ರೊಫೇಷನಲ್ II
ಒಟ್ಟು ಹುದ್ದೆ: 2
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 12
ಐಸಿಎಂಆರ್ ಸಂಸ್ಥೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ NCD ಎಪಿಡೆಮಿಯಾಲಜಿ ಸಂಸ್ಥೆಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ನೀತಿ, ಸಾರ್ವಜನಿಕ ಆರೋಗ್ಯ, ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ www.icmr.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಕನ್ಸಲ್ಟಂಟ್ ಹುದ್ದೆಯ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ recruitment@icmrnine.org ಗೆ ಮೇಲ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 42 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.



















