ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಇಂಟೆಲಿಜೆಂಟ್ ಕಮ್ಯುನಿಕೇಶನ್ ಸಿಸ್ಟಮ್ಸ್ ಇಂಡಿಯಾ ಲಿಮಿಟೆಡ್ (ICSIL Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 48 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಇದರೊಂದಿಗೆ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡುವ ಅವಕಾಶ ಲಭಿಸಿದ್ದು, ಸೆಪ್ಟೆಂಬರ್ 4ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ ಹೆಸರು : ಇಂಟೆಲಿಜೆಂಟ್ ಕಮ್ಯುನಿಕೇಶನ್ ಸಿಸ್ಟಮ್ಸ್ ಇಂಡಿಯಾ ಲಿಮಿಟೆಡ್ (ICSIL)
ಹುದ್ದೆಯ ಹೆಸರು : ಡೇಟಾ ಎಂಟ್ರಿ ಆಪರೇಟರ್
ಹುದ್ದೆಗಳ ಸಂಖ್ಯೆ : 48
ಉದ್ಯೋಗ ಸ್ಥಳ : ದೆಹಲಿ-ರಾಷ್ಟ್ರ ರಾಜಧಾನಿ ಪ್ರದೇಶ (NCR)
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ, ಅದರಲ್ಲೂ ಎಂಎಸ್ ಆಫೀಸ್ (ವರ್ಡ್, ಎಕ್ಸೆಲ್, ಪವರ್ ಪಾಯಿಂಟ್) ಆಪರೇಟ್ ಮಾಡಬೇಕಾಗಿರುವುದು ಕಡ್ಡಾಯವಾಗಿದೆ. ಹಾಗೆಯೇ, ನಿಮಿಷಕ್ಕೆ 30 ಪದಗಳನ್ನು ಟೈಪ್ ಮಾಡುವ ಸಾಮರ್ಥ್ಯ ಇರಬೇಕು ಎಂದು ತಿಳಿಸಲಾಗಿದೆ.
ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ಪ್ರದೇಶದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಸಿದ್ಧರಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 22,411 ರೂಪಾಯಿ ಸಂಬಳ ನೀಡಲಾಗುತ್ತದೆ. ಇವು ಗುತ್ತಿಗೆ ಆಧಾರದ ಮೇಲೆ ನೇಮಕವಾಗುವ ಹುದ್ದೆಗಳಾಗಿವೆ. ಅರ್ಜಿಗಳ ಪರಿಶೀಲನೆ, ಟೈಪಿಂಗ್ ಸ್ಕಿಲ್ ಟೆಸ್ಟ್, ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರು https://icsil.in/ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
 
                                 
			 
			
 
                                 
                                


















