ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಇಂಟೆಲಿಜೆಂಟ್ ಕಮ್ಯುನಿಕೇಶನ್ ಸಿಸ್ಟಮ್ಸ್ ಇಂಡಿಯಾ ಲಿಮಿಟೆಡ್ (ICSIL) ಸಂಸ್ಥೆಯಲ್ಲಿ ಖಾಲಿ ಇರುವ 5 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ನಡೆಸಲಾಗುತ್ತದೆ. ಆಗಸ್ಟ್ 18ರಂದು ವಾಕ್ ಇನ್ ಸಂದರ್ಶನ ನಡೆಯಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ ಹೆಸರು : ಇಂಟೆಲಿಜೆಂಟ್ ಕಮ್ಯುನಿಕೇಶನ್ ಸಿಸ್ಟಮ್ಸ್ ಇಂಡಿಯಾ ಲಿಮಿಟೆಡ್ (ICSIL)
ಹುದ್ದೆಯ ಹೆಸರು : ಡೇಟಾ ಎಂಟ್ರಿ ಆಪರೇಟರ್
ಹುದ್ದೆಗಳ ಸಂಖ್ಯೆ : 5
ಉದ್ಯೋಗ ಸ್ಥಳ : ನವದೆಹಲಿ
ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಪ್ರತಿ ದಿನ 937 ರೂಪಾಯಿಗಳವೆರೆಗೆ ವೇತನ ನೀಡಲಾಗುತ್ತದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರೈಸಿರಬೇಕು. ಅಭ್ಯರ್ಥಿಗಳಿಗೆ ಕನಿಷ್ಠ 22 ವರ್ಷ ಮತ್ತು ಗರಿಷ್ಠ 42 ವರ್ಷದ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ 590 ರೂಪಾಯಿ ಅರ್ಜಿ ಶುಲ್ಕವಿದೆ.
ಸಂದರ್ಶನ ನಡೆಯುವ ಸ್ಥಳ
Intelligent Communication Systems India Limited,
Administrative Building, 1st Floor,
Above Post Office, Okhla Industrial Estate, Phase-III,
New Delhi – 110020