ಬೆಂಗಳೂರು: ಇಂಡಸ್ಟ್ರಿಯಲ್ ಡೆವಲಪ್ ಮೆಂಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (IDBI Bank Recruitment 2025) 676 ಜೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 20 ಕೊನೆಯ ದಿನವಾದ ಕಾರಣ ಆಸಕ್ತಿಯುಳ್ಳ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಇದಲ್ಲದೇ ವಯೋಮಿತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಕನಿಷ್ಠ ವಯಸ್ಸನ್ನು 20 ವರ್ಷ ಮತ್ತು ಗರಿಷ್ಠ 25 ವರ್ಷಗಳಿಗೆ ನಿಗದಿಪಡಿಸಲಾಗಿದೆ. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಐಡಿಬಿಐ ಅಧಿಕೃತ ವೆಬ್ಸೈಟ್ www.idbibank.in ಗೆ ಭೇಟಿ ನೀಡುವ ಅರ್ಜಿ ಸಲ್ಲಿಸಬಹುದು.
ಮೀಸಲಾತಿ ವರ್ಗೀಕರಣ
ಮೀಸಲು ಇರದ ಹುದ್ದೆಗಳು- 271
ಒಬಿಸಿ- 124
ಇಡಬ್ಲ್ಯೂಎಸ್- 67
ಎಸ್ ಸಿ- 140
ಎಸ್ ಟಿ- 74
ಒಟ್ಟು- 676
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಶುಲ್ಕ ನಿಗದಿಪಡಿಸಲಾಗಿದೆ. ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ವರ್ಗಕ್ಕೆ 1050 ರೂ. ಮತ್ತು ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ವರ್ಗಕ್ಕೆ 250 ರೂ. ಶುಲ್ಕ ಇದೆ. ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ದಿನಾಂಕವನ್ನು ಐಡಿಬಿಐ ಜೂನ್ 8 ಎಂದು ಘೋಷಿಸಿದೆ. ಪರೀಕ್ಷೆಗೆ ಕೆಲವು ದಿನಗಳ ಮೊದಲು ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.