ಬೆಂಗಳೂರು: ಅಂಗನವಾಡಿ (anganwadi) ಕೇಂದ್ರಗಳಲ್ಲಿಯೇ ಎಲ್ ಕೆಜಿ, ಯುಕೆಜಿ ತರಗತಿ ಆರಂಭಿಸಲು ಸಿಎಂ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದಾರೆ. ಕಾನ್ವೆಂಟ್ ಮಾದರಿಯ ಶಿಕ್ಷಣ ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ.
ಹೀಗಾಗಿ ಇನ್ನು ಮುಂದೆ ಅಂಗನವಾಡಿಗಳಲ್ಲೇ ಖಾಸಗಿ ಶಾಲೆಗಳಂತೆ ಎಲ್ ಕೆಜಿ. ಯುಕೆಜಿ ಶಿಕ್ಷಣ ಸಿಗಲಿದೆ. ಈ ಮೂಲಕ ಸಿದ್ದರಾಮಯ್ಯ ಅವರು ಅಂಗನವಾಡಿ ಕಾರ್ಯಕರ್ಯರು ಹಾಗೂ ಶಿಕ್ಷಣ ಇಲಾಖೆ ನಡುವೆ ಇದ್ದಂತಹ ಗೊಂದಲವನ್ನು ಬಗೆಹರಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಪ್ರತಿಭಟನೆ ಹಿನ್ನೆಲೆಯಲ್ಲಿ ಸೋಮವಾರ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಇಲಾಖೆಯ ಉನ್ನತ ಅಧಿಕಾರಿಗಳ ಜತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದ್ದು, ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಸಿಎಂ ಸೂಚಿಸಿದ್ದಾರೆ.
