ಚಿಕ್ಕಮಗಳೂರು : ‘ಮುಲ್ಲಾಗಳಿಗೆ ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ’ ಎಂಬ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಹೇಳಿಕೆ ವಿರುದ್ಧ ಚಿಕ್ಕಮಗಳೂರಿನಲ್ಲಿ ಮುಸ್ಲಿಂ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ನಗರದ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಎಸ್‌ಡಿಪಿಐ ಮುಖಂಡ ಅತೀಕ್ ಮಾತನಾಡಿ, ಮುಸ್ಲಿಂ ಸಮುದಾಯವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವುದು ಸರಿಯಲ್ಲ ಎಂದು ಸಿಟಿ ರವಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಸಿ.ಟಿ. ರವಿ ಭಾಷಣ ಮಾಡುವ ಮುನ್ನ ಯೋಚಿಸಿ ಮಾತನಾಡಬೇಕು. ಇದೇ ರೀತಿಯ ಪ್ರಚೋದನಕಾರಿ ಹೇಳಿಕೆಗಳನ್ನು ಮುಂದುವರಿಸಿದರೆ ಚಿಕ್ಕಮಗಳೂರಿಗೆ ಬರದಂತೆ ತಡೆಯುತ್ತೇವೆ. ಅಗತ್ಯವಿದ್ದರೆ ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಪ್ರತಿಭಟನೆ ನಡೆಸಿ ಅವರನ್ನು ನಗರಕ್ಕೆ ನುಗ್ಗಲು ಬಿಡುವುದಿಲ್ಲ. ಇದು ನಮ್ಮ ಎಚ್ಚರಿಕೆ ಎಂದು ಅತೀಕ್ ಹೇಳಿದ್ದಾರೆ.
“ಮುಲ್ಲಾಗಳು ಯಾರೂ ಅನಕ್ಷರಸ್ಥರಲ್ಲ. ಸಿ.ಟಿ. ರವಿ ಎದೆ ಸೀಳಿದರೆ ಎಷ್ಟು ಅಕ್ಷರಗಳಿವೆ ಎಂದು ಹೇಳಬೇಕು” ಎಂದು ಅತೀಕ್ ತಿರುಗೇಟು ನೀಡಿದ್ದಾರೆ. ಈ ಹೇಳಿಕೆಗಳ ಬಳಿಕ ಬಿಜೆಪಿ ಕಾರ್ಯಕರ್ತರಲ್ಲೂ ಆಕ್ರೋಶ ವ್ಯಕ್ತವಾಗಿದ್ದು, ಎರಡೂ ಕಡೆಯವರ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ.
ಸಿ.ಟಿ. ರವಿ ಬಳಸಿದ ಎನ್ನಲಾದ ‘ಮುಲ್ಲಾ’ ಪದದ ಕುರಿತು ಉಂಟಾಗಿರುವ ವಿವಾದ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಈ ಸಂಬಂಧ ಪರಸ್ಪರ ಆರೋಪ-ಪ್ರತ್ಯಾರೋಪಗಳು ಮುಂದುವರಿದಿವೆ. ಪತ್ರಿಕಾಗೋಷ್ಠಿಯಲ್ಲಿ ನೀಡಲಾದ ಹೇಳಿಕೆಗಳು ಇದೀಗ ಜಿಲ್ಲೆಯ ರಾಜಕೀಯ ವಾತಾವರಣವನ್ನು ಮತ್ತಷ್ಟು ಕಾವೇರಿಸಿವೆ.
ಇದನ್ನೂ ಓದಿ : ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!



















