ಯಾದಗಿರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಸಂಸ್ಕೃತ ಬಲ್ಲವರು ಹಾಗಾಗಿ ಅಧಿವೇಶನದಲ್ಲಿ ಸಮಯಕ್ಕೆ ತಕ್ಕಂತೆ ಉತ್ತರಿಸುವ ಬದಲು ಆರ್.ಎಸ್.ಎಸ್ ಗೀತೆ ಹಾಡಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ವರದಿಗಾರರಿಗೆ ಪ್ರತಿಕ್ರಿಯಿಸಿ ಮಾತನಾಡಿದ ಡಿಕೆಶಿ, ಆರ್ ಎಸ್‌ಎಸ್ ಗೀತೆ ಹಾಡಿದರೆ ಮುಖ್ಯಮಂತ್ರಿ ಸ್ಥಾನ ಸಿಗುವುದಾದರೆ ನಾನು ಶಾಸಕ ಚನ್ನಾರಡ್ಡಿ ಪಾಟೀಲ್ ಇಬ್ಬರು ಹಾಡುತ್ತೆವೆ ಎಂದು ವ್ಯಂಗ್ಯವಾಡಿದ್ದಾರೆ.
ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ಅವರನ್ನು ಟೀಕಿಸಿದ ಮಹೇಶ ಶೆಟ್ಟಿ ತಿಮರೋಡಿ ಅವರನ್ನು “ಒದ್ದು ಒಳಗೆ ಹಾಕಿದ್ದೇವೆ” ಎಂಬ ಮಾತು ಕೂಡಾ ದೂರು ಬಂದ ಹಿನ್ನಲೆಯಲ್ಲಿ ಹೇಳಿದ್ದಾಗಿದೆ. ಈ ಎರಡನ್ನೂ ಬೇರೆ ರೀತಿಯಲ್ಲಿ ಹೊಲಿಕೆ ಮಾಡುವುದು ಸರಿಯಲ್ಲ ಎಂದಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಏನೇ ಬದಲಾವಣೆಯಾದರೂ ಅದಕ್ಕೆ ಹೈಕಮಾಂಡ್ ನೇರ ಕಾರಣ ಹೊರತು ರಾಜ್ಯದ ಬೇರೆ ಯಾರೂ ಅಲ್ಲ ಎಂದು ಅವರು ಹೇಳಿದ್ದಾರೆ.