ಮೈಸೂರು: ಮುಡಾ ವಿಚಾರದಲ್ಲಿ ವಿಪಕ್ಷಗಳು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಗಿ ಬಿದ್ದರೆ, ಶಾಸಕ ಜಿ.ಟಿ. ದೇವೇಗೌಡ ಅವರು ಮಾತ್ರ ಸಿಎಂ ಪರ ಬ್ಯಾಟಿಂಗ್ ಮಾಡಿದ್ದರು. ಹೀಗಾಗಿ ಅವರು ಜೆಡಿಎಸ್ ನಿಂದ ತಿರಸ್ಕಾರಕ್ಕೆ ಒಳಪಟ್ಟಿದ್ದರು. ಈಗ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ, ಅವರು ಮಾತ್ರ ಅಲ್ಲಗಳೆದ್ದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಯಾವತ್ತೂ ಖುದ್ದಾಗಿ ಕಾಂಗ್ರೆಸ್ ಗೆ ಆಹ್ವಾನಿಸಿಲ್ಲ. ನಾನು ದಸರಾದಲ್ಲಿ ಅವರ ಜೊತೆ ವೇದಿಕೆ ಹಂಚಿಕೆ ಕೊಂಡಿದ್ದು ಬಿಟ್ಟರೆ ಮತ್ತೆ ಅವರನ್ನು ಭೇಟಿ ಮಾಡಿಲ್ಲ. ಅವರು ಯಾವತ್ತಿಗೂ ಪಕ್ಷಕ್ಕೆ ಬಾ ಎಂದು ವೈಯಕ್ತಿಕವಾಗಿ ಹೇಳಿಲ್ಲ ಎಂದಿದ್ದಾರೆ.
ಯಾವುದೊ ಸಭೆಯಲ್ಲಿ ಹೇಳಿರಬಹುದು. ಅದು ನನಗೆ ಗೊತ್ತಿಲ್ಲ. ಸಾರ್ವತ್ರಿಕ ಚುನಾವಣೆಗೂ ಮುನ್ನ ಡಿಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಆಪ್ತ ಕಾರ್ಯದರ್ಶಿ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದರು. ಆ ವೇಳೆಯೂ ನಾನು ಕಾಂಗ್ರೆಸ್ ಪಕ್ಷ ಸೇರಿಲ್ಲ ಎದಿದ್ದಾರೆ.
ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು. ಧೈರ್ಯವಾಗಿ ಮತ್ತೆ ಪಕ್ಷ ಸಂಘಟನೆ ಮಾಡಬೇಕು. ಚನ್ನಪಟ್ಟಣ ಪ್ರಚಾರಕ್ಕೆ ನನ್ನನ್ನು ಯಾರೂ ಕರೆದಿಲ್ಲ. ಅಭ್ಯರ್ಥಿ ಕರೆಯಲಿಲ್ಲ, ದೊಡ್ಡವರು ಕೂಡ ಪ್ರಚಾರಕ್ಕೆ ಕರೆದಿಲ್ಲ. ಅವರಿಗೆ ನನ್ನ ಅವಶ್ಯಕತೆ ಇದ್ದಂತೆ ಕಾಣುತ್ತಿಲ್ಲ. ಜಿ.ಟಿ.ದೇವೇಗೌಡಗೆ ವಯಸ್ಸಾಗಿದೆ. ರಾಜಕೀಯದಿಂದ ನಿವೃತ್ತಿಯಾಗಲಿ, ನಮಗೆ ಅವರ ಮಗ ಹರೀಶ್‌ಗೌಡ ಸಾಕು ಎಂಬ ಆದೇಶ ಅವರಿಂದ ಆದಂತಿದೆ. JDS, ಬಿಜೆಪಿ ಒಂದಾಗಿದೆ. ಹೀಗಾಗಿ ಜಿಟಿಡಿ ನಿವೃತ್ತಿ ತೆಗೆದುಕೊಳ್ಳಲಿ ಎಂಬ ಭಾವನೆ ಇರಬಹುದು ಎಂದು ಹೇಳಿದ್ದಾರೆ.