ಬೆಂಗಳೂರು : ನೀವೇನಾದರೂ ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿದ್ದೀರಾ? ಕೇಂದ್ರ ಸರ್ಕಾರದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಇಂಡಿಯನ್ ಹೈವೇ ಮ್ಯಾನೇಜ್ ಮೆಂಟ್ ಕಂಪನಿ ಲಿಮಿಟೆಡ್ (IHMCL Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 30 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನೇಮಕಾತಿ ಸಂಸ್ಥೆ: ಇಂಡಿಯನ್ ಹೈವೇ ಮ್ಯಾನೇಜ್ ಮೆಂಟ್ ಕಂಪನಿ ಲಿಮಿಟೆಡ್ (IHMCL)
ಒಟ್ಟು ಹುದ್ದೆಗಳು: 30
ಹುದ್ದೆಯ ಹೆಸರು: ಸಿಸ್ಟಮ್ಸ್ ಎಂಜಿನಿಯರ್
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 2
ನೇಮಕಾತಿ ಹೊಂದಿದವರಿಗೆ ಮಾಸಿಕ 50 ಸಾವಿರ ರೂಪಾಯಿಯಿಂದ 1.6 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿಇ ಅಥವಾ ಬಿ.ಟೆಕ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ನಡೆಸಿ, ಗೇಟ್ ಸ್ಕೋರ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ihmcl.co.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು
ಇದನ್ನೂ ಓದಿ : ಮೈಸೂರು ಜಿಲ್ಲೆಯವರಿಗೆ ಶುಭ ಸಮಾಚಾರ : ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ನೇಮಕಾತಿ


















