ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ ಸಂಸ್ಥೆಯಲ್ಲಿ ಖಾಲಿ ಇರುವ 10 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 10 ಟೆಕ್ನಿಶಿಯನ್ (IICT Recruitment 2025) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿ ಕುರಿತ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ (IICT)
ಹುದ್ದೆಗಳ ಹೆಸರು: ಟೆಕ್ನಿಶಿಯನ್
ಒಟ್ಟು ಹುದ್ದೆಗಳು: 10
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 30
ಫಾರ್ಮಸಿ, ಗೆಸ್ಟ್ ಹೌಸ್, ಜನರಲ್ ನರ್ಸಿಂಗ್ ವಿಭಾಗದಲ್ಲಿ ಟೆಕ್ನಿಶಿಯನ್ ಆಗಿ ಕಾರ್ಯನಿರ್ವಹಿಸಲು ಬಯಸುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಅಥವಾ ಐಟಿಐ ಪೂರ್ಣಗೊಳಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಉಳಿದವರಿಗೆ 500 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 39 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಟ್ರೇಡ್ ಟೆಸ್ಟ್, ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ iict.res.in ಗೆ ಭೇಟಿ ನೀಡಬೇಕು
ನಿಮಗೆ ಹುದ್ದೆಯ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಬಳಿಕ ಅರ್ಜಿಯನ್ನು ಸಲ್ಲಿಸಬೇಕು
ಇದನ್ನೂ ಓದಿ : ಅಫ್ಘಾನಿಸ್ತಾನದಲ್ಲಿ 13 ಮಂದಿಯನ್ನು ಕೊಂದವನಿಗೆ 13ರ ಬಾಲಕನಿಂದಲೇ ಮರಣದಂಡನೆ!



















