ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉತ್ತಮ ಸಂಬಳ ಬರುವ ಕೆಲಸಕ್ಕಾಗಿ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯಲ್ಲಿ (IIHR Recruitment 2025) ಖಾಲಿ ಇರುವ 02 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಯಂಗ್ ಪ್ರೊಫೆಷನಲ್-1 ಹಾಗೂ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗಾಗಿ ಆಫ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯಲ್ಲಿ (IIHR)
ಒಟ್ಟು ಹುದ್ದೆಗಳು: 02
ಹುದ್ದೆಗಳ ಹೆಸರು: ಯಂಗ್ ಪ್ರೊಫೆಷನಲ್-1 ಹಾಗೂ ಸೀನಿಯರ್ ರಿಸರ್ಚ್ ಫೆಲೋ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 04
ಯಂಗ್ ಪ್ರೊಫೆಷನಲ್-1 ಹುದ್ದೆಗೆ ಅರ್ಜಿ ಸಲ್ಲಿಸುವವರು ಬಿಎಸ್ಸಿ ಮುಗಿಸಿರಬೇಕು ಹಾಗೂ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಂಎಸ್ಸಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 42 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಕನಿಷ್ಠ 21 ವರ್ಷದಿಂದ 42 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ.
ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕ ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ವೈಯಕ್ತಿಕ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರು ಮೊದಲು iihr.res.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ನಂತರ ಅಗತ್ಯ ದಾಖಲೆಗಳೊಂದಿಗೆ The Head, ICAR-Central Horticultural Experiment Station, Chettalli, Kodagu-571248 ವಿಳಾಸಕ್ಕೆ ಕಳುಹಿಸಬೇಕು. ಅಕ್ಟೋಬರ್ 9ರಂದು ಸಂದರ್ಶನ ನಡೆಯಲಿದೆ.