ಬೆಂಗಳೂರು: ಕರ್ನಾಟಕದ ಬೆಂಗಳೂರಿನಲ್ಲಿಯೇ ಕೇಂದ್ರ ಸರ್ಕಾರದ ಹುದ್ದೆಗಳನ್ನು ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಬೆಂಗಳೂರಿನಲ್ಲಿಯೇ ಇರುವ ಇಂಟರ್ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಷನ್ ಟೆಕ್ನಾಲಜಿ ಸಂಸ್ಥೆಯು ಹಲವು ಹುದ್ದೆಗಳ ನೇಮಕಾತಿಗಾಗಿ (IIIT Bangalore Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಸೀನಿಯರ್ ರಿಸರ್ಚ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಯ ವಿವರ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಟರ್ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಷನ್ ಟೆಕ್ನಾಲಜಿ ಸಂಸ್ಥೆ (IIIT Bangalore)
ಹುದ್ದೆ ಹೆಸರು: ಸೀನಿಯರ್ ರಿಸರ್ಚ್ ಅಸೋಸಿಯೇಟ್
ಒಟ್ಟು ಹುದ್ದೆಗಳು: ವಿವಿಧ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 15
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸ್ನಾತಕೋತ್ತರ ಪದವಿ ಅಥವಾ ಪಿಎಚ್.ಡಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಕೆಯಾದ ಬಳಿಕ ಮೆರಿಟ್ ಲಿಸ್ಟ್ ಬಿಡುಗಡೆ ಮಾಡಲಾಗುತ್ತದೆ. ನಂತರ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ iiitb.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಂಡು, ಅಧಿಸೂಚನೆಯನ್ನು ಓದಬೇಕು. ಅಧಿಸೂಚನೆಯಲ್ಲಿ ತಿಳಿಸಿದ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅರ್ಜಿ ಹಾಗೂ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು sri@iiitb.ac.in ವಿಳಾಸಕ್ಕೆ ನವೆಂಬರ್ ನವೆಂಬರ್ 15ರೊಳಗೆ ಮೇಲ್ ಮಾಡಬೇಕು.
ಇದನ್ನೂ ಓದಿ : ಕೇಂದ್ರ ಸರ್ಕಾರದ ನಬಾರ್ಡ್ ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ 3 ಜಿಲ್ಲೆಗಳಲ್ಲಿ ಉದ್ಯೋಗ



















