ಬೆಂಗಳೂರು: ಕೇಂದ್ರ ಸರ್ಕಾರದ ಹುದ್ದೆಗಳನ್ನು ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಧಾರವಾಡ ದಲ್ಲಿರುವ ಇರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಷನ್ ಟೆಕ್ನಾಲಜಿ ಸಂಸ್ಥೆಯಲ್ಲಿ ಖಾಲಿ ಇರುವ (IIIT Dharwad Recruitment 2026) 10 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಷನ್ ಟೆಕ್ನಾಲಜಿ ಸಂಸ್ಥೆ
ಹುದ್ದೆ ಹೆಸರು: ಜೂನಿಯರ್ ಎಂಜಿನಿಯರ್ ಇತ್ಯಾದಿ
ಒಟ್ಟು ಹುದ್ದೆಗಳು: 10
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 9
ಉದ್ಯೋಗ ಸ್ಥಳ: ಧಾರವಾಡ
ಜೂನಿಯರ್ ಎಂಜಿನಿಯರ್, ಫಿಸಿಕಲ್ ಟ್ರೈನಿಂಗ್ ಇನ್ ಸ್ಟ್ರಕ್ಟರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳಿಗೆ 32 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಕೆಯಾದ ಬಳಿಕ ಮೆರಿಟ್ ಲಿಸ್ಟ್ ಬಿಡುಗಡೆ ಮಾಡಲಾಗುತ್ತದೆ. ನಂತರ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ iiitdwd.ac.inವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು.
ಇದನ್ನೂ ಓದಿ :ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!


















