ಬೆಂಗಳೂರು : ಭತ್ತದ ನಾಡು ರಾಯಚೂರಿನಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಷನ್ ಟೆಕ್ನಾಲಜಿ ಸಂಸ್ಥೆಯಲ್ಲಿ ಖಾಲಿ ಇರುವ 8 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 8 ಅಸಿಸ್ಟಂಟ್ ಪ್ರೊಫೆಸರ್ (IIIT Raichur Recruitment 2026) ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಷನ್ ಟೆಕ್ನಾಲಜಿ, ರಾಯಚೂರು
ಹುದ್ದೆಗಳ ಹೆಸರು: ಅಸಿಸ್ಟಂಟ್ ಪ್ರೊಫೆಸರ್
ಒಟ್ಟು ಹುದ್ದೆಗಳು: 8
ಉದ್ಯೋಗ ಸ್ಥಳ: ರಾಯಚೂರು
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 20
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪಡೆದಿರಬೇಕು. ಅಭ್ಯರ್ಥಿಗಳು ಕನಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಒಬಿಸಿ, ಇಡಬ್ಲ್ಯೂಎಸ್ ನವರಿಗೆ 2 ಸಾವಿರ ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ iiitr.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು
ಇದನ್ನೂ ಓದಿ : ಆಟೋ ಗ್ಯಾಸ್ ಬಂಕ್‌ಗೆ ಪೊಲೀಸರ ನೋಟಿಸ್ – ಕಾನೂನು ಕ್ರಮದ ಎಚ್ಚರಿಕೆ!



















