ಬೆಂಗಳೂರು : ನೀವು ಮಾಸ್ಟರ್ ಆಫ್ ಲೈಬ್ರರಿ ಆ್ಯಂಡ್ ಇನ್ಫಾರ್ಮೇಷನ್ ಸೈನ್ಸ್ ಮುಗಿಸಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಬೆಂಗಳೂರಿನಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಸಂಸ್ಥೆಯಲ್ಲಿ (IIMB Recruitment 2026) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ಲೈಬ್ರರಿ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹರು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್, ಬೆಂಗಳೂರು
ಹುದ್ದೆಗಳ ಹೆಸರು: ಲೈಬ್ರರಿ ಟ್ರೈನಿ
ಒಟ್ಟು ಹುದ್ದೆಗಳು: ವಿವಿಧ
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 10
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಎಂಎಲ್ ಐಎಸ್ಸಿ ಕೋರ್ಸ್ ಮುಗಿಸಿರಬೇಕು. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 25 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ iimb.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು
ಇದನ್ನೂ ಓದಿ : ಗಂಡನ ಮನೆಯವರ ಕಿರುಕುಳಕ್ಕೆ 4 ತಿಂಗಳ ಗರ್ಭಿಣಿ ಬಲಿ – ಅತ್ತೆ, ಮಾವ ಸೇರಿ ನಾಲ್ವರ ಬಂಧನ



















