ಬೆಂಗಳೂರು: ನೀವು ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ, ದೇಶದ ಅಗ್ರ ಬಿಸಿನೆಸ್ ಮ್ಯಾನೇಜ್ ಮೆಂಟ್ ಸಂಸ್ಥೆಯಾಗಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ (IIMB Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ಸೇಫ್ಟಿ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಕೆಳಗಿನಂತಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್, ಬೆಂಗಳೂರು (IIMB)
ಹುದ್ದೆ ಹೆಸರು: ಸೇಫ್ಟಿ ಎಂಜಿನಿಯರ್
ಒಟ್ಟು ಹುದ್ದೆ: 2
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜನವರಿ 24
ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ iimb.ac.in ಗೆ ಭೇಟಿ ನೀಡಬೇಕು.
ಸೇಫ್ಟಿ ಎಂಜಿನಿಯರ್ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ; ಕೇಂದ್ರ ಸರ್ಕಾರಿ ನೌಕರರಿಗೆ ಸಂಕ್ರಾಂತಿ ಸಿಹಿ ಸುದ್ದಿ | ಸಿಗಲಿದೆ 22 ದಿನಗಳ ಬೋನಸ್


















