ಬೆಂಗಳೂರು: ಕರ್ನಾಟಕದ ಬೆಂಗಳೂರಿನಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆಯಲ್ಲಿ ಖಾಲಿ (IISc Recruitment 2025) ಇರುವ ವಿವಿಧ ಪ್ರೋಗ್ರಾಂ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲೇ ಲಕ್ಷಾಂತರ ರೂಪಾಯಿ ಸಂಬಳ ಬರುವ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಇದು ಉತ್ತಮ ಅವಕಾಶವಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್
ಹುದ್ದೆಗಳ ಹೆಸರು: ಪ್ರೋಗ್ರಾಂ ಮ್ಯಾನೇಜರ್
ಒಟ್ಟು ಹುದ್ದೆಗಳು: ಪ್ರಸ್ತಾಪ ಮಾಡಿಲ್ಲ
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಪಡೆದಿರಬೇಕು. ಅದರಲ್ಲೂ, ಎಂಡಿ, ಎಂಎಸ್, ಎಂಡಿಎಸ್, ಎಂವಿಎಸ್ಸಿ, ಎಂಪಿಎಚ್ ಕೋರ್ಸ್ ಗಳನ್ನು ಮುಗಿಸಿದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಅಧಿಸೂಚನೆ ಪ್ರಕಾರ, ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಮಾಸಿಕ 82 ಸಾವಿರ ರೂಪಾಯಿಯಿಂದ 1.76 ಲಕ್ಷ ರೂಪಾಯಿವರೆಗೆ ವೇತನ ನೀಡಲಾಗುತ್ತದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಗಸ್ಟ್ 23 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್‌ಸೈಟ್ https://iisc.ac.in/ ಗೆ ಭೇಟಿ ನೀಡಬೇಕು
- ಪ್ರೋಗ್ರಾಂ ಮ್ಯಾನೇಜರ್ ಹುದ್ದೆಯ ಅಧಿಸೂಚನೆಯನ್ನು ಓದಬೇಕು
- ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
- ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ಭರ್ತಿ ಮಾಡಬೇಕು
- ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು office.icnsm@iisc.ac.in ಇ-ಮೇಲ್ ವಿಳಾಸಕ್ಕೆ ಸಲ್ಲಿಸಬೇಕು



















