ಬೆಂಗಳೂರು: ಬೆಂಗಳೂರಿನಲ್ಲಿಯೇ ಕೈತುಂಬ ಸಂಬಳದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ (IISc Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ರಿಸರ್ಚ್ ಅಸೋಸಿಯೇಟ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್
ಹುದ್ದೆಗಳ ಹೆಸರು: ರಿಸರ್ಚ್ ಅಸೋಸಿಯೇಟ್-I
ಒಟ್ಟು ಹುದ್ದೆಗಳು: 01
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಏಪ್ರಿಲ್ 19
ನೇಮಕಾತಿ ಹೊಂದಿದವರಿಗೆ ಮಾಸಿಕ 58 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಮೊದಲಿಗೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಯ ಕೆಲಸದ ದಕ್ಷತೆ ಗಮನಿಸಿ 2029ರವರೆಗೆ ಸೇವಾವಧಿ ವಿಸ್ತರಣೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪಿಎಚ್.ಡಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ iisc.ac.in ಗೆ ಭೇಟಿ ನೀಡಬೇಕು
ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆ ಸಿದ್ಧಪಡಿಸಿಕೊಳ್ಳಬೇಕು
ಅರ್ಜಿ ಹಾಗೂ ದಾಖಲೆಗಳನ್ನು jagirdar@iisc.ac.in ವಿಳಾಸಕ್ಕೆ ಮೇಲ್ ಮಾಡಬೇಕು
ಇದನ್ನೂ ಓದಿ: ಕೇಂದ್ರ ಸರ್ಕಾರದ NIT ಸಂಸ್ಥೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್



















