ಬೆಂಗಳೂರು: ನೀವು ಬಿಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿ, ಬೆಂಗಳೂರಿನಲ್ಲೇ ಒಳ್ಳೆಯ ಉದ್ಯೋಗ ಪಡೆಯಲು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ (IISc Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಎಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್
ಹುದ್ದೆಗಳ ಹೆಸರು: ಸೀನಿಯರ್ ಕ್ಲಿನಿಕಲ್ ಎಂಜಿನಿಯರ್
ಒಟ್ಟು ಹುದ್ದೆಗಳು: ವಿವಿಧ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜನವರಿ 22
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಎಸ್ಸಿ, ಎಸ್ಟಿ ಸಮುದಾಯದವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿ ಸಮುದಾಯವರಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ iisc.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲೆಗಳ ಸಾಫ್ಟ್ ಕಾಪಿಗಳನ್ನು office@iiscmedicalschoolfoundation.org ಗೆ ಮೇಲ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಕೇಂದ್ರ ಸರ್ಕಾರದ NALCO ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ | 1.8 ಲಕ್ಷ ರೂ. ಸಂಬಳ


















