ಬೆಂಗಳೂರು : ನೀವೇನಾದರೂ ಎಂಬಿಬಿಎಸ್ ಕೋರ್ಸ್ ಮುಗಿಸಿದ್ದೀರಾ? ಬೆಂಗಳೂರಿನಲ್ಲಿಯೇ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ, ಶುಭ ಸಮಾಚಾರ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ (IISc Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್
ಹುದ್ದೆಗಳ ಹೆಸರು: ಮೆಡಿಕಲ್ ಆಫೀಸರ್
ಒಟ್ಟು ಹುದ್ದೆಗಳು: 03
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮಾರ್ಚ್ 17
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಬಿಬಿಎಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 30 ವರ್ಷಗಳ ವಯೋಮಿತಿ ಇದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 48 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಪರಿಶೀಲನೆಯ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆದು, ನಂತರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಪರಿಶೀಲನೆಯ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆದು, ನಂತರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ iisc.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಮೂಲಕವೇ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅಪ್ ಲೋಡ್ ಮಾಡಬೇಕು.
ಇದನ್ನೂ ಓದಿ : ವೈಭವ್ ಸೂರ್ಯವಂಶಿಗೆ 2026ರ ಐಪಿಎಲ್ ಅಗ್ನಿಪರೀಕ್ಷೆ.. ಯುವ ಪ್ರತಿಭೆಯ ಹಾದಿ ಅಷ್ಟು ಸುಲಭವಲ್ಲ ಎಂದ ಉತ್ತಪ್ಪ!



















