ಬೆಂಗಳೂರು : ನೀವು ಬೆಂಗಳೂರಿನಲ್ಲೇ ಒಳ್ಳೆಯ ಉದ್ಯೋಗ ಪಡೆಯಲು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ (IISc Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 4 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್
ಹುದ್ದೆಗಳ ಹೆಸರು: ಡೆವಲಪ್ ಮೆಂಟ್ ಆಫೀಸರ್
ಒಟ್ಟು ಹುದ್ದೆಗಳು: 04
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಫೆಬ್ರವರಿ 20
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಬಿಎ, ಸ್ನಾತಕೋತ್ತರ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಎಸ್ಸಿ, ಎಸ್ಟಿ ಸಮುದಾಯದವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿ ಸಮುದಾಯವರಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 50 ವರ್ಷಗಳ ವಯೋಮಿತಿ ಇದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 1.8 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ iisc.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಮೂಲಕವೇ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅಪ್ ಲೋಡ್ ಮಾಡಬೇಕು. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಇದನ್ನೂ ಓದಿ : ಬಿಕ್ಲು ಶಿವ ಕೊ*ಲೆ ಕೇಸಲ್ಲಿ ಮಾಜಿ ಮಿನಿಸ್ಟರ್ ಬೇಲ್ ರಿಜೆಕ್ಟ್ | ಅಡಗಿದ MLA ಬೈರತಿ ಬಸವರಾಜ್‌ಗಾಗಿ ‘ಖಾಕಿ’ ಶೋಧ ಸ್ಟಾರ್ಟ್!



















