ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಕೆಲಸ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ (IISc Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 4 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್
ಹುದ್ದೆಗಳ ಹೆಸರು: ಎಸ್ಎಪಿ ಫಂಕ್ಷನಲ್ ಅನಾಲಿಸ್ಟ್ (SAP Functional Analyst)
ಒಟ್ಟು ಹುದ್ದೆಗಳು: 4
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 6
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ, ಬಿ.ಟೆಕ್, ಬಿಎಸ್ಸಿ, ಬಿಸಿಎ, ಎಂಸಿಎ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 30 ವರ್ಷಗಳ ವಯೋಮಿತಿ ಇದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 29 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಎಸ್ಸಿ, ಎಸ್ಟಿ, ವಿಶೇಷ ಚೇತನರು, ಒಬಿಸಿ ಸೇರಿ ಯಾರಿಗೂ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ iisc.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಮೂಲಕವೇ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅಪ್ ಲೋಡ್ ಮಾಡಬೇಕು. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಇದನ್ನೂ ಓದಿ : ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್
ಇದನ್ನೂ ಓದಿ :


















