ಬೆಂಗಳೂರು : ಬೆಂಗಳೂರಿನಲ್ಲೇ ಕೆಲಸ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ (IISc Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 40 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್
ಹುದ್ದೆಗಳ ಹೆಸರು: ಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್
ಒಟ್ಟು ಹುದ್ದೆಗಳು: 40
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜೂನ್ 18
34 ಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್ ಹಾಗೂ 6 ಡೆಪ್ಯೂಟಿ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 56 ವರ್ಷಗಳ ವಯೋಮಿತಿ ಇದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 29,200 ರೂಪಾಯಿಯಿಂದ 1.51 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಎಸ್ಸಿ, ಎಸ್ಟಿ, ವಿಶೇಷ ಚೇತನರು ಹಾಗೂ ಮಹಿಳೆಯರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದವರಿಗೆ 450 ರೂಪಾಯಿ ಅರ್ಜಿ ಶುಲ್ಕವಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ iisc.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಮೂಲಕವೇ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅಪ್ ಲೋಡ್ ಮಾಡಬೇಕು. ಆಪ್ಟಿಟ್ಯೂಡ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಇದನ್ನೂ ಓದಿ : ಬೆಂಗಳೂರಿನಲ್ಲಿರುವ NIMHANS ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ



















