ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ

September 20, 2026
Share on WhatsappShare on FacebookShare on Twitter

ಮುಂಬೈ : ಪರೀಕ್ಷೆಯಲ್ಲಿ ಚಾಟ್ ಜಿಪಿಟಿ ಕೃತಕ ಬುದ್ಧಿಮತ್ತೆ ಬಳಸಿ ವಂಚಿಸಲು ಯತ್ನಿಸುವಾಗ ಸಿಕ್ಕಿಬಿದ್ದು, ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಬೇರೆ ತಿರುವು ಪಡೆದುಕೊಂಡಿದೆ. ಎರಡನೇ ವರ್ಷದ ಎಂ.ಎಸ್ಸಿ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೊಫೆಸರ್ ಸೂರ್ಯನಾರಾಯಣ್ ದುಲ್ಲಾ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಥಮ ಮಾಹಿತಿ ವರದಿಯಲ್ಲಿ (ಎಫ್‌ಐಆರ್) ಇತರೆ ಇಬ್ಬರು ಅಜ್ಞಾತ ವ್ಯಕ್ತಿಗಳನ್ನೂ ಹೆಸರಿಸಲಾಗಿದ್ದು, ಪ್ರಕರಣದ ತನಿಖೆಯನ್ನು ಮುಂಬೈ ಪೊಲೀಸರ ಕ್ರೈಂ ಬ್ರಾಂಚ್‌ಗೆ ಹಸ್ತಾಂತರಿಸಲಾಗಿದೆ.

ವಿದ್ಯಾರ್ಥಿಯ ತಂದೆ ರವೀಂದ್ರ ಚಕ್ರಧರ್ ವಾಂಖಡೆ ಅವರು ನೀಡಿರುವ ದೂರಿನ ಆಧಾರದ ಮೇಲೆ, ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಜಂಟಿ ಹೊಣೆಗಾರಿಕೆಯಡಿ ಕೇಸ್ ದಾಖಲಿಸಲಾಗಿದೆ. ಜೊತೆಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿಯೂ ಪ್ರಕರಣಗಳನ್ನು ದಾಖಲಿಸಲು ನಿರ್ಧರಿಸಲಾಗಿದೆ.

3 ತಿಂಗಳಿಂದ ಜಾತಿ ನಿಂದನೆ, ಕಿರುಕುಳ ಆರೋಪ

ಸಾಹಿಲ್ ಅವರ ತಂದೆ ಸಲ್ಲಿಸಿರುವ ದೂರಿನ ಪ್ರಕಾರ, ಕಳೆದ ಮೂರು ತಿಂಗಳುಗಳಿಂದ ಅವರ ಮಗ ತೀವ್ರ ಮಾನಸಿಕ ಕಿರುಕುಳ ಹಾಗೂ ಜಾತಿ ಆಧಾರಿತ ನಿಂದನೆಗೆ ಒಳಗಾಗಿದ್ದ. ಸಂಸ್ಥೆಯ ನಿರ್ದೇಶಕ ಶಿರೀಶ್ ಬಿ ಕೆದಾರೆ ಅವರ ಸೂಚನೆಯ ಮೇರೆಗೆ ಪರೀಕ್ಷೆಯ ಮೇಲ್ವಿಚಾರಕರಾಗಿದ್ದ ಪ್ರೊಫೆಸರ್ ಸೂರ್ಯನಾರಾಯಣ್ ದುಲ್ಲಾ ಅವರು ಸಾಹಿಲ್ ಮೇಲೆ ಜಾತಿ ನಿಂದನೆ ಮಾಡಿದ್ದರೆಂದು ಆರೋಪಿಸಲಾಗಿದೆ. ಸಾಹಿಲ್ ಕೆಳಜಾತಿಗೆ ಸೇರಿದವನೆಂಬ ಕಾರಣಕ್ಕೆ ಆತನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸುವುದಾಗಿ ಪ್ರೊಫೆಸರ್ ಬೆದರಿಕೆ ಹಾಕಿದ್ದರೆಂದು ತಂದೆ ದೂರಿದ್ದು, ಈ ಮಾನಸಿಕ ಹಿಂಸೆಯೇ ಮಗನ ಸಾವಿಗೆ ಕಾರಣ ಎಂದು ಹೇಳಿದ್ದಾರೆ.

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಕೆ

ಶುಕ್ರವಾರ ಪರೀಕ್ಷೆಯ ಸಮಯದಲ್ಲಿ ಸಾಹಿಲ್ ತಮ್ಮ ಮೊಬೈಲ್ ಫೋನ್ ಬಳಸಿ, ಚಾಟ್‌ಜಿಪಿಟಿ ಮೂಲಕ ಪ್ರಶ್ನೆಪತ್ರಿಕೆಗೆ ಉತ್ತರ ಹುಡುಕಲು ಯತ್ನಿಸಿದಾಗ ಸಿಕ್ಕಿಬಿದ್ದಿದ್ದರು. ಇದರ ಬೆನ್ನಲ್ಲೇ ಅದೇ ಸಂಜೆ ಅವರು ತಮ್ಮ ಹಾಸ್ಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆದರೆ ಐಐಟಿ ಬಾಂಬೆ ಈ ಕುರಿತು ಪ್ರಕಟಣೆ ಹೊರಡಿಸಿದ್ದು, ವಿದ್ಯಾರ್ಥಿಯ ವಿರುದ್ಧ ಯಾವುದೇ ಶಿಸ್ತುಕ್ರಮ ಕೈಗೊಂಡಿರಲಿಲ್ಲ ಎಂದು ಹೇಳಿದೆ. ಘಟನೆಯ ನಂತರ ವಿಭಾಗೀಯ ಮುಖ್ಯಸ್ಥರು ಹಾಗೂ ಶಿಕ್ಷಕರು ವಿದ್ಯಾರ್ಥಿಗೆ ಕೌನ್ಸಿಲಿಂಗ್ ನಡೆಸಿ, ಈ ಘಟನೆಯಿಂದ ಆತನ ಶೈಕ್ಷಣಿಕ ವೃತ್ತಿಜೀವನಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಭರವಸೆ ನೀಡಿದ್ದರು ಎಂದು ಸಂಸ್ಥೆ ಪ್ರತಿಪಾದಿಸಿದೆ.

ಕ್ಯಾಂಪಸ್‌ನಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಕರಣಗಳು

ಐಐಟಿ ಬಾಂಬೆ ಪೋವಾಯಿ ಕ್ಯಾಂಪಸ್‌ನಲ್ಲಿ ಕಳೆದ ಏಳು ತಿಂಗಳುಗಳಲ್ಲಿ ಸಂಭವಿಸಿದ ಮೂರನೇ ಆತ್ಮಹತ್ಯೆ ಘಟನೆ ಇದಾಗಿದೆ. ಇದಕ್ಕೂ ಮೊದಲು ಫೆಬ್ರವರಿಯಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಹಾಗೂ ಜುಲೈನಲ್ಲಿ ಬಿ.ಟೆಕ್ ದ್ವಿತೀಯ ವರ್ಷದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದರು. ಸರಣಿ ಆತ್ಮಹತ್ಯೆ ಘಟನೆಗಳು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಮಾನಸಿಕ ಆರೋಗ್ಯದ ಕುರಿತು ತೀವ್ರ ಕಳವಳವನ್ನು ಹುಟ್ಟುಹಾಕಿವೆ. ಜೊತೆಗೆ, ಸಾಹಿಲ್ ಆತ್ಮಹತ್ಯೆಯ ಬೆನ್ನಲ್ಲೇ ರೊಚ್ಚಿಗೆದ್ದ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಭಾರೀ ಪ್ರತಿಭಟನೆಯನ್ನೂ ನಡೆಸಿದ್ದಾರೆ.

ಇದನ್ನೂ ಓದಿ : ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ

Tags: caste abuse casecaste discrimination allegationsEducation NewsIIT Bombay newsIIT Bombay professorIIT Bombay student suicideInvestigation orderedMumbai Crime branchSC ST Actstudent suicide case
SendShareTweet
Previous Post

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ

Next Post

ರೈಲ್ವೆ ಇಲಾಖೆಯ IRCTCಯಲ್ಲಿ 28 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Related Posts

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ
ದೇಶ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!
ದೇಶ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು
ಕ್ರೀಡೆ

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ
ದೇಶ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!
ದೇಶ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ
ದೇಶ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

Next Post
ರೈಲ್ವೆ ಇಲಾಖೆಯ IRCTCಯಲ್ಲಿ 28 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ರೈಲ್ವೆ ಇಲಾಖೆಯ IRCTCಯಲ್ಲಿ 28 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat