ಬೆಂಗಳೂರು: ನೀವು ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿದ್ದೀರಾ? ಎಂ.ಇ ಅಥವಾ ಎಂ.ಟೆಕ್ ಕೋರ್ಸ್ ಮುಗಿಸಿ ಉದ್ಯೋಗಕ್ಕೆ ಕಾಯುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಧಾರವಾಡದಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT Dharwad Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 7 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟಂಟ್ ರಿಜಿಸ್ಟ್ರಾರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಧಾರವಾಡ
ಹುದ್ದೆಗಳ ಹೆಸರು: ಅಸಿಸ್ಟಂಟ್ ರಿಜಿಸ್ಟ್ರಾರ್ ಇತ್ಯಾದಿ
ಒಟ್ಟು ಹುದ್ದೆಗಳು: 7
ಉದ್ಯೋಗ ಸ್ಥಳ: ಧಾರವಾಡ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 14
ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಸಿಸ್ಟಂಟ್ ರಿಜಿಸ್ಟ್ರಾರ್, ಜೂನಿಯರ್ ಸೂಪರಿಂಟೆಂಡೆಂಟ್, ಸೀನಿಯರ್ ಎಂಜಿನಿಯರ್, ಟೆಕ್ನಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಇ, ಬಿಟೆಕ್, ಎಂಇ, ಪಿಎಚ್.ಡಿ ಹಾಗೂ ಎಂಟೆಕ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ 34ರಿಂದ ಗರಿಷ್ಠ 56 ವರ್ಷದ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ iitdh.ac.in ಗೆ ಭೇಟಿ ನೀಡಬೇಕು
- ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಯ ಅಧಿಸೂಚನೆಯನ್ನು ಓದಬೇಕು
- ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
- ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಿ, ಸಲ್ಲಿಸಬೇಕು
- ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಇದನ್ನೂ ಓದಿ: ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 11 ಹುದ್ದೆಗಳ ನೇಮಕ : ಅರ್ಜಿ ಸಲ್ಲಿಕೆಗೆ 5 ದಿನ ಬಾಕಿ



















