ಬೆಂಗಳೂರು : ನೀವು ಧಾರವಾಡದವರಾ? ನಿಮ್ಮ ಜಿಲ್ಲೆಯಲ್ಲೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಧಾರವಾಡದಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT Dharwad Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಎರಡು ಲೈಬ್ರರಿ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಧಾರವಾಡ
ಹುದ್ದೆಗಳ ಹೆಸರು: ಲೈಬ್ರರಿ ಟ್ರೈನಿ
ಒಟ್ಟು ಹುದ್ದೆಗಳು: 2
ಉದ್ಯೋಗ ಸ್ಥಳ: ಧಾರವಾಡ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 31
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂ.ಎಲ್.ಐ.ಎಸ್ಸಿ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ ಗರಿಷ್ಠ 26 ವರ್ಷದ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅಲ್ಲಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 25 ಸಾವಿರ ರೂ. ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ iitdh.ac.in ಗೆ ಭೇಟಿ ನೀಡಬೇಕು
ಲೈಬ್ರರಿ ಟ್ರೈನಿ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಿ, ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಇದನ್ನೂ ಓದಿ : ದಿಲೀಪ್ ರಾಜ್ ನಿಧನ ; ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು!



















