ಬೆಂಗಳೂರು : ಪಿಯುಸಿ, ಬಿಪಿಎಡ್, ಡಿಪ್ಲೋಮಾ ಮುಗಿಸಿ ಉದ್ಯೋಗಕ್ಕಾಗಿ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಧಾರವಾಡದಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT Dharwad Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 6 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕ್ರೀಡಾ ತರಬೇತುದಾರರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಧಾರವಾಡ
ಹುದ್ದೆಗಳ ಹೆಸರು: ಕ್ರೀಡಾ ತರಬೇತುದಾರ
ಒಟ್ಟು ಹುದ್ದೆಗಳು: 6
ಉದ್ಯೋಗ ಸ್ಥಳ: ಧಾರವಾಡ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮಾರ್ಚ್ 2
ಬ್ಯಾಡ್ಮಿಂಟನ್, ಅಥ್ಲೆಟಿಕ್ಸ್, ಫುಟ್ ಬಾಲ್, ಟೇಬಲ್ ಟೆನ್ನಿಸ್, ಸ್ವಿಮ್ಮಿಂಗ್ ಹಾಗೂ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ತರಬೇತುದಾರರಾಗಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪಿಯುಸಿ, ಬಿಪಿಎಡ್, ಡಿಪ್ಲೋಮಾ, ಪಿಜಿಡಿಪಿಎಡ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ಪ್ರತಿಯೊಬ್ಬರಿಗೂ 200 ರೂಪಾಯಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಕೌಶಲ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 25 ಸಾವಿರ ರೂಪಾಯಿಯಿಂದ 35 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ iitdh.ac.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಿ, ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಇದನ್ನೂ ಓದಿ : ಒಂದು ಕಾರು ಕೊಂಡರೆ ಇನ್ನೊಂದು ಕಾರು ಉಚಿತ.. ವೈರಲ್ ಆಗಿದ್ದ ‘ಸಿಟ್ರನ್’ ಆಫರ್ ಹಿಂದಿನ ಅಸಲಿ ಕಥೆ ಏನು?



















