ಬೆಂಗಳೂರು: ನೀವು ಪದವಿ ಮುಗಿಸಿ ಉದ್ಯೋಗಕ್ಕೆ ಕಾಯುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಧಾರವಾಡದಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT Dharwad Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಡಿಟ್ ಕನ್ಸಲ್ಟಂಟ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಧಾರವಾಡ
ಹುದ್ದೆಗಳ ಹೆಸರು: ಆಡಿಟ್ ಕನ್ಸಲ್ಟಂಟ್
ಒಟ್ಟು ಹುದ್ದೆಗಳು: 1
ಉದ್ಯೋಗ ಸ್ಥಳ: ಧಾರವಾಡ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಫೆಬ್ರವರಿ 8
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ ಗರಿಷ್ಠ 65 ವರ್ಷದ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಲಿಖಿತ ಪರೀಕ್ಷೆ, ಪ್ರೆಸೆಂಟೇಷನ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ iitdh.ac.in ಗೆ ಭೇಟಿ ನೀಡಬೇಕು
- ಆಡಿಟ್ ಕನ್ಸಲ್ಟಂಟ್ ಹುದ್ದೆಯ ಅಧಿಸೂಚನೆಯನ್ನು ಓದಬೇಕು
- ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
- ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಿ, ಸಲ್ಲಿಸಬೇಕು
- ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಇದನ್ನೂ ಓದಿ: ಕೃಷಿ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ಹುದ್ದೆಗಳ ನೇಮಕಾತಿ | 2.18 ಲಕ್ಷ ರೂಪಾಯಿ ಸ್ಯಾಲರಿ



















