ಬೆಂಗಳೂರು : ಪದವಿ ಮುಗಿಸಿ ಉದ್ಯೋಗಕ್ಕಾಗಿ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಧಾರವಾಡದಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT Dharwad Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 1 ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 1 ಆಡಿಟ್ ಕನ್ಸಲ್ಟಂಟ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಧಾರವಾಡ
ಹುದ್ದೆಗಳ ಹೆಸರು: ಆಡಿಟ್ ಕನ್ಸಲ್ಟಂಟ್
ಒಟ್ಟು ಹುದ್ದೆಗಳು: 1
ಉದ್ಯೋಗ ಸ್ಥಳ: ಧಾರವಾಡ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 7
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 65 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ iitdh.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು
ಇದನ್ನೂ ಓದಿ : ಕೊಹ್ಲಿಯ ಹೊಸ ಅವತಾರ ; ಅತಿವೇಗದಲ್ಲಿ 15 ಸಾವಿರ ಒಡಿಐ ರನ್ಗಳ ಸರದಾರ ಚೇಸ್ ಮಾಸ್ಟರ್!



















