ಬೆಂಗಳೂರು : ಪದವಿ, ಸ್ನಾತಕೋತ್ತರ ಪದವಿ, ಬಿ.ಇ, ಬಿ.ಟೆಕ್ ಕೋರ್ಸ್ ಮುಗಿಸಿ ಉದ್ಯೋಗಕ್ಕಾಗಿ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಧಾರವಾಡದಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT Dharwad Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 12 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟಂಟ್ ರಿಜಿಸ್ಟ್ರಾರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಧಾರವಾಡ
ಹುದ್ದೆಗಳ ಹೆಸರು: ಅಸಿಸ್ಟಂಟ್ ರಿಜಿಸ್ಟ್ರಾರ್
ಒಟ್ಟು ಹುದ್ದೆಗಳು: 12
ಉದ್ಯೋಗ ಸ್ಥಳ: ಧಾರವಾಡ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 13
2 ಅಸಿಸ್ಟಂಟ್ ರಿಜಿಸ್ಟ್ರಾರ್, 3 ಜೂನಿಯರ್ ಸೂಪರಿಂಟೆಂಡೆಂಟ್, 2 ಜೂನಿಯರ್ ಅಸಿಸ್ಟಂಟ್ ಹಾಗೂ 5 ಜೂನಿಯರ್ ಟೆಕ್ನಿಕಲ್ ಸೂಪರಿಂಟೆಂಡೆಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ, ಬಿ.ಇ, ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 42 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ iitdh.ac.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಿ, ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಇದನ್ನೂ ಓದಿ : ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ



















