ನವದೆಹಲಿ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟಾಕ್ಸಿಕಾಲಜಿ ರಿಸರ್ಚ್ (ಐಐಟಿಆರ್) ಸಂಸ್ಥೆಯಲ್ಲಿ ಜೂನಿಯರ್ ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಮೇ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಕೇಂದ್ರ ಸರ್ಕಾರದ ಅಧೀನದ ಸಂಸ್ಥೆ ಇದಾಗಿದ್ದು, ಮಾಸಿಕ 50,200 ರೂ.ವರೆಗೆ ಸಂಬಳ ನೀಡಲಾಗುತ್ತದೆ. ಹಿಂದಿ ಅಥವಾ ಇಂಗ್ಲಿಷ್ ಸ್ಟೆನೋಗ್ರಫಿಯಲ್ಲಿ ಪರಿಣತಿ ಹೊಂದಿದವರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು https://iitr.res.in/ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಜನರಲ್ ಹಾಗೂ ಒಬಿಸಿಯವರಿಗೆ 500 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿ, ಇಡಬ್ಲ್ಯೂಎಸ್ ಹಾಗೂ ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 27 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. “ವೈ” ಸಿಟಿಯಲ್ಲಿ ಕಾರ್ಯನಿರ್ವಹಿಸುವ ಕೇಂದ್ರ ಸರ್ಕಾರಿ ನೌಕರರಿಗೆ ನೀಡುವ ಸಂಬಳ ಹಾಗೂ ಭತ್ಯೆಗಳು ಜ್ಯೂನಿಯರ್ ಸ್ಟೆನೋಗ್ರಾಫರ್ ಗೂ ಸಿಗಲಿವೆ. ಲಿಖಿತ ಪರೀಕ್ಷೆ ಹಾಗೂ ಸ್ಟೆನೋಗ್ರಫಿ ದಕ್ಷತೆ ಪರೀಕ್ಷೆಯನ್ನು ನಡೆಸುವ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ.
ಲಿಖಿತ ಪರೀಕ್ಷೆಯನ್ನು ಒಎಂಆರ್ ಅಥವಾ ಕಂಪ್ಯೂಟರ್ ಆಧಾರಿತವಾಗಿ ನಡೆಸಲಾಗುತ್ತದೆ. ಆಬ್ಜೆಕ್ಟಿವ್ ಟೈಪ್ ಮಲ್ಟಿಪಲ್ ಚಾಯ್ಸ್ 200 ಪ್ರಶ್ನೆಗಳಿಗೆ 2 ಗಂಟೆಯಲ್ಲಿ ಉತ್ತರಿಸಬೇಕಾಗುತ್ತದೆ. ಪ್ರಶ್ನೆಗಳು ಹಿಂದಿ ಹಾಗೂ ಇಂಗ್ಲಿಷ್ ನಲ್ಲಿ ಇರುತ್ತವೆ. ಸ್ಟೆನೋಗ್ರಫಿ ಪರೀಕ್ಷೆ 10 ನಿಮಿಷ ಇರುತ್ತದೆ. ಒಂದು ನಿಮಿಷಕ್ಕೆ 80 ಪದಗಳನ್ನು ಟೈಪ್ ಮಾಡಲು ಬರಬೇಕು ಎಂಬ ನಿಯಮ ಇದೆ.



















