ದಕ್ಷಿಣಕನ್ನಡ: ನಕಲಿ ನಂಬರ್ ಪ್ಲೇಟ್ ಬಳಸಿ ಕಾರ್ ನಲ್ಲಿ ಅಕ್ರಮ ಗೋಸಾಗಾಟ ಮಾಡುತ್ತಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ನಡೆದಿದೆ.
ಇನೋವಾ ಕಾರ್ ನಲ್ಲಿ ಮೂರು ದನಗಳನ್ನು ತುಂಬಿಕೊಂಡು ಬಂಧಿತ ಸಾಗಾಟ ಮಾಡುತ್ತಿದ್ದರು. ಅತಿ ವೇಗದಿಂದ ವಾಹನವನ್ನು ಚಾಲನೆ ಮಾಡುತ್ತಿದ್ದರಿಂದ ಪೊಲೀಸರು ಅನುಮಾನ ಗೊಂಡು ವಾಹನ ನಿಲ್ಲಿಸಲು ಯತ್ನಿಸಿದ್ದಾರೆ.
ಈ ವೇಳೆ ಆರೋಪಿಗಳು ಕಾರ್ ತಡೆದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ ಇಬ್ಬರ ಪೈಕಿ ಓರ್ವನನ್ನು ಬಂಧಿಸಿದ್ದಾರೆ.