ಕೊಡಗು: ಸರ್ಕಾರದ ಅನ್ನಭಾಗ್ಯದ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಮನೆ ಮನೆಗಳಿಂದ ಅಕ್ಕಿ ಸಂಗ್ರಹಿಸುತ್ತಿದ್ದ ವೇಳೆ ಆಹಾರ ಇಲಾಖೆ ಅಧಿಕಾರಿಗಳ ಬಳಿ ಆರೋಪಿಗಳು ಸಿಕ್ಕಿಬಿದ್ದ ಘಟನೆ ಕುಶಾಲನಗರದ ಸುಂದರನಗರ ಗ್ರಾಮದಲ್ಲಿ ನಡೆದಿದೆ.
ಆಹಾರ ನಿರೀಕ್ಷಕಿ ಸ್ವಾತಿ ಅವರಿಂದ ಕಾರ್ಯಾಚರಣೆ ನಡೆಸಲಾಗಿದ್ದು, ಅಧಿಕಾರಿಗಳನ್ನು ನೋಡುತ್ತಿದ್ದಂತೆ ಆಟೋ ಬಿಟ್ಟು ಡ್ರೈವರ್ ಪರಾರಿಯಾಗಿದ್ದಾನೆ.
ಅಕ್ಕಿ ಲೋಡಿಂಗ್ ಮಾಡುತ್ತಿದ್ದ ವ್ಯಕ್ತಿಯೊರ್ವನನ್ನು ಬಂಧಿಸಲಾಗಿದ್ದು, ಆಟೋದಲ್ಲಿ ಸಂಗ್ರಹ ಮಾಡಿದ್ದ ಮೂರು ಕ್ವಿಂಟಾಲ್ ಗೂ ಅಧಿಕ ಅಕ್ಕಿ ವಶಕ್ಕೆ ಪಡೆಯಲಾಗಿದೆ.
ಕುಶಾಲನಗರ ಗ್ರಾಮಾಂತರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















