ಉಡುಪಿ/ಮಲ್ಪೆ: ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನ ಮತ್ತು ಮರಳನ್ನು ಮಲ್ಪೆ ಪೊಲೀಸರು ಸ್ವಾಧೀನಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೊಡವೂರು ಗ್ರಾಮದ ತೊಟ್ಟಂ ರಸ್ತೆ ಬಳಿ ಜು.22ರಂದು ವಾಹನ ತಪಾಸಣೆ ಮಾಡುತ್ತಿರುವಾಗ ಗೂಡ್ಸ್ ವಾಹನವೊಂದು ಹೂಡೆ ಕಡೆಯಿಂದ ಮಲ್ಪೆ ಕಡೆಗೆ ಅನುಮಾನಾಸ್ಪದವಾಗಿ ಚಲಾಯಿಸಿಕೊಂಡು ಬಂದಿದ್ದು, ಪೊಲೀಸರು ಪರಿಶೀಲನೆ ನಡೆಸಿದಾಗ ಅದರಲ್ಲಿ ಅರ್ಧ ಯುನಿಟ್‌ನಷ್ಟು ಮರಳು ತುಂಬಿರುವುದು ಕಂಡು ಬಂದಿದೆ. ಈ ಬಗ್ಗೆ ವಿಚಾರಿಸಿದಾಗ ಮರಳು ಸಾಗಾಟದ ಬಗ್ಗೆ ಯಾವುದೇ ದಾಖಲೆಗಳು ಇಲ್ಲದಿರುವುದು ಕಂಡು ಬಂದಿದೆ. ವಾಹನ ಮತ್ತು ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.



















