ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನಲ್ಲಿ ಅನ್ನಭಾಗ್ಯ ಯೋಜನೆಯಡಿ ನೀಡುವ ಅಕ್ಕಿಯನ್ನು ಫಲಾನುಭವಿಗಳಿಂದ ಸಂಗ್ರಹಿಸಿ ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಅರೋಪಿಗಳನ್ನು ಬಂಧಿಸಿದ್ದಾರೆ.
ಸುಮಾರು 1,36,000 ಕಿಮ್ಮತ್ತಿನ 40 ಕ್ವಿಂಟಾಲ್ ಅಕ್ಕಿಯನ್ನು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಂದ ಸಂಗ್ರಹಿಸಿ ,ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಶಿರಸಿಯಿಂದ ಹುಬ್ಬಳ್ಳಿ ಕಡೆ ಸಾಗಿಸುತ್ತಿದ್ದಾಗ ಆರೋಪಿತರಾದ ಮೊಹಮದ್ ಉಬೇದ್,ಅಲ್ತಾಪ್ ಹಾಗೂ ಸುನೀಲ್‌ರನ್ನು ಬಂಧಿಸಲಾಗಿದೆ.
ಈ ಸಂಬಂಧ ಶಿರಸಿ ನಗರ ಠಾಣಾ ವ್ಯಾಪ್ತಿಯಲ್ಲಿ ಅವಶ್ಯ ವಸ್ತುಗಳ ಕಾಯ್ದೆ-1955 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.



















