ದಾವಣಗೆರೆ: ರಾಜ್ಯದಲ್ಲಿ ಇನ್ನು ನಿಲ್ಲದ ಪಡಿತರ ಅಕ್ಕಿ ಅಕ್ರಮ ಸಾಗಾಟ ದಂಧೆ. ಕಾಳಸಂತೆಯಲ್ಲಿ ಮಾರಾಟ ಮಾಡಲು 48 ಚೀಲ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರದಲ್ಲಿನಡೆದಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಆಹಾರ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿಯು 48 ಚೀಲಗಳಲ್ಲಿದ್ದ 28 ಕ್ವಿಂಟಾಲ್ ಅಕ್ಕಿ ಜಪ್ತಿ ಮಾಡಿದ್ದಾರೆ. ಈ ಘಟನಾ ಸಂಬಂಧ ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬಳ್ಳಾರಿ | ಸ್ನೇಹಿತರೊಂದಿಗೆ ಕೆರೆಗೆ ಈಜಲು ತೆರಳಿದ್ದ ಬಾಲಕ ಸಾವು..!



















