ಚಿತ್ರದುರ್ಗ: ಅನೈತಿಕ ಸಂಬಂಧ ಹಿನ್ನೆಲೆ ಪಾಪಿ ಪತಿಯೊಬ್ಬ ಪತ್ನಿಯನ್ನೇ ಕೊಲೆಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಹಿರೇ ಎಮ್ಮಿಗನೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಮತ (48) ಕೊಲೆಯಾದ ಮಹಿಳೆ. ರವಿಕುಮಾರ್ ಪತ್ನಿಯನ್ನು ಕೊಲೆ ಮಾಡಿದ್ದ ಪಾಪಿ ಪತಿ. ಆಕೆ ಏಣಿ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಸಂಬಂಧಿಕರ ಮುಂದೆ ಕಥೆ ಕಟ್ಟಿ, ತರಾತುರಿಯಲ್ಲಿ ಅಂತ್ಯಕ್ರಿಯೆ ಮಾಡಲು ಸಿದ್ದತೆ ನಡೆಸಿದ್ದ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ್ದ ಚಿಕ್ಕಜಾಜೂರು ಪೊಲೀಸರು. ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಂತೆ ಕೊಲೆ ರಹಸ್ಯ ಬಾಯ್ಬಿಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್, ಡಿವೈಎಸ್ಪಿ ದಿನಕರ್, ಸಿಪಿಐ ಶ್ರೀಶೈಲ ಚೌಗುಲೆ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಘಟನಾ ಸಂಬಂಧ ಚಿಕ್ಕಜಾಜೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದು ಹಿಚ್ಚಿನ ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ; ಆಕಸ್ಮಿಕವಾಗಿ ಹೊತ್ತಿ ಉರಿದ ಕಾರವಾರದ ಡೆಸರ್ಟಿನೊ ಕೆಫೆ | ತಪ್ಪಿದ ಭಾರೀ ಅನಾಹುತ



















