ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡವು ಕ್ರಿಕೆಟ್ ಅಂಗಳದ ಬದ್ಧ ವೈರಿ ಆಸ್ಟ್ರೇಲಿಯಾವನ್ನು ಬಗ್ಗು ಬಡಿದು ಫೈನಲ್ ಪ್ರವೇಶಿಸಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಉತ್ತಮವಾಗಿ ಆಡಿದ್ದು, ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಬಾರಿಸದಿದ್ದರೂ ಅವರ ಉತ್ತಮ ಪ್ರದರ್ಶನ ತಂಡದ ಗೆಲುವಿಗೆ ಕಾರಣವಾಯಿತು.
ಆಸ್ಟ್ರೇಲಿಯಾ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಬಿಗ್ ಇನ್ನಿಂಗ್ಸ್ ಆಡುವ ಮೂಲಕ ವಿರಾಟ್ ಕೊಹ್ಲಿ, ಐಸಿಸಿ ನಾಕೌಟ್ ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ತಮ್ಮ ಹೋರಾಟವನ್ನು ಮುಂದುವರೆಸಿದ್ದಾರೆ. ಈ ನಿರ್ಣಾಯಕ ಪಂದ್ಯದಲ್ಲಿ ಕೊಹ್ಲಿ 84 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಇದು ಏಕದಿನ ಕ್ರಿಕೆಟ್‌ನಲ್ಲಿ ಅವರ 73 ನೇ ಅರ್ಧಶತಕವಾಗಿದೆ. ರನ್ ಚೇಸಿಂಗ್‌ನಲ್ಲಿ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ಇದು 41 ನೇ ಅರ್ಧಶತಕವಾಗಿದೆ. ಆಸ್ಟ್ರೇಲಿಯಾ ವಿರುದ್ಧದ ರನ್ ಚೇಸ್‌ನಲ್ಲಿ ಇದು 7ನೇ ಅರ್ಧ ಶತಕವಾಗಿದೆ.
ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ವಿರಾಟ್ ಗಳಿಸಿದ 84 ರನ್‌ಗಳು ಕಳೆದ 6 ಐಸಿಸಿ ನಾಕೌಟ್ ಪಂದ್ಯಗಳಲ್ಲಿ ಅವರ ಬ್ಯಾಟ್‌ನಿಂದ ಬಂದ 5ನೇ ಅರ್ಧಶತಕವಾಗಿದೆ. ಕಳೆದ 6 ಐಸಿಸಿ ನಾಕೌಟ್ ಪಂದ್ಯಗಳಲ್ಲಿ ವಿರಾಟ್ ಕ್ರಮವಾಗಿ 51*, 76, 9, 54, 117 ಮತ್ತು 50 ರನ್ ಗಳಿಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ 6 ನಾಕೌಟ್ ಪಂದ್ಯಗಳಲ್ಲಿ ಸುಮಾರು 72 ಸರಾಸರಿಯಲ್ಲಿ 390 ರನ್ ಗಳಿಸಿದ ಸಾಧನೆ ಮಾಡಿದ್ದಾರೆ.