ಬಳ್ಳಾರಿ: ಬಳ್ಳಾರಿ ಜಿಲ್ಲಾ ಆಸ್ಪತ್ರೆ (BIMS)ಯಲ್ಲಿ ಬಾಣಂತಿಯರ ಸಾವಿನ ಸುದ್ದಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಈ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅವಾಂತರ ಬೆಳಕಿಗೆ ಬಂದಿದೆ.
ಬಿಮ್ಸ್ ಆಸ್ಪತ್ರೆಯಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಮಹಿಳಾ ಕಂಪ್ಯೂಟರ್ ಆಪರೇಟರ್ಗೆ ಬಳ್ಳಾರಿ (Ballari) ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀಕ್ಷಕ ವಿ.ಕೆ.ವೆಂಕಟೇಶ್ ಎಂಬಾತ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.
ಈ ಕುರಿತು ಸಂತ್ರಸ್ತೆ, ವೆಂಕಟೇಶ್ ವಿರುದ್ಧ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್ ಐಆರ್ ದಾಖಲಿಸಿಕೊಳ್ಳಲಾಗಿದೆ.
ಅಧೀಕ್ಷಕ ವಿ.ಕೆ.ವೆಂಕಟೇಶ್ ಕಳೆದ ವರ್ಷ ನವೆಂಬರ್ 25 ರಂದು ಸಂತ್ರಸ್ತೆಯ ಮೇಲೆ ಹಲ್ಲೆ ಮಾಡಿ, ತನ್ನೊಂದಿಗೆ ಕಳೆದ ಖಾಸಗಿ ಕ್ಷಣಗಳ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ದೂರು ಸಲ್ಲಿಸಿದ್ದಾರೆ. ಸದ್ಯ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ