ರಾಜ್ಯದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ 15ರ ವರೆಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈಗಾಗಲೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಉತ್ತಮವಾಗಿ ಮಳೆ ಸುರಿಯುತ್ತಿದ್ದು ಜನ – ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಈ ಮಧ್ಯೆ ಹವಮಾನ ಇಲಾಖೆಯು ಈ ಮಳೆಯ ರೌದ್ರಾವತಾರ ಅ. 15ರ ವರೆಗೆ ಮುಂದುವರೆಯಲಿದೆ ಎಂದು ಹೇಳಿದ್ದು, ಜನರು ಎಚ್ಚರಿಕೆಯಿಂದ ಇರಬೇಕಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನುಳಿದಂತೆ ಇನ್ನಿತರ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.