ಬೆಂಗಳೂರು: ರಾಜ್ಯಾದ್ಯಂತ ಚಳಿ ಕಡಿಮೆಯಾಗುತ್ತಿದ್ದು, ಬಿಸಿಲ ತಾಪಮಾನ ಹೆಚ್ಚಾಗುತ್ತಿದೆ. ಮುಂದಿನ ಒಂದೆರಡು ದಿನಗಳಲ್ಲಿ ಗರಿಷ್ಠ ಉಷ್ಣಾಂಶ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಒಂದೆರಡು ದಿನಗಳಲ್ಲಿ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಸೆಕೆ ಹೆಚ್ಚಲಿದೆ. ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಎರಡು ದಿನಗಳಲ್ಲಿ ಗರಿಷ್ಠ ಉಷ್ಣಾಂಶ 2-4 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.