ಮಡಿಕೇರಿ: ವಧುವಿಗಾಗಿ ತಂದಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ನಡೆದಿದೆ.
ಈ ಘಟನೆ ಕೊಡಗು ಜಿಲ್ಲೆಯ (Kodagu) ಕುಶಾಲನಗರ ತಾಲೂಕಿನ ರೈತ ಭವನದಲ್ಲಿ ಈ ಘಟನೆ ನಡೆದಿದೆ. ಸಂಬಂಧಿಕರು ಎದು ಹೇಳಿಕೊಂಡು ಬಂದಿದ್ದ ಯುವಕನೊಬ್ಬ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಅಂದಾಜು 45 ಸಾವಿರ ರೂ. ಮೌಲ್ಯದ ಚಿನ್ನ, 50 ಸಾವಿರ ರೂ. ಮೌಲ್ಯದ ಚಿನ್ನದ ಕಡಗ, 23 ಸಾವಿರ ರೂ. ಮೌಲ್ಯದ ಚಿನ್ನದ ಓಲೆ ಸೇರಿದಂತೆ 50 ಸಾವಿರ ರೂ. ಕದ್ದು ಪರಾರಿಯಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಘಟನೆ ಕುರಿತು ಕುಶಾಲನಗರ ನಗರ ಠಾಣೆಗೆ ವಧುವಿನ ಪೋಷಕರು ದೂರು ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.