ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಜಿಲ್ಲಾ ಪೊಲೀಸ್ನ ಡಿಎಆರ್ ವಸತಿ ಗೃಹಗಳ ಲೋಕಾರ್ಪಣೆ ಕಾರ್ಯಕ್ರಮ ನೆರವೇರಿದೆ. ಈ ಕಾರ್ಯಕ್ರಮದಲ್ಲಿ ಸಚಿವ ಕೆ. ಬಸವಂತಪ್ಪ, ಶಾಸಕ ಗವಿಯಪ್ಪ, ಹುಡಾ ಅಧ್ಯಕ್ಷ ಇಮಾಮ್ ನಿಯಾಜಿ, ಜಿಲ್ಲಾಧಿಕಾರಿ ಕವಿತಾ ಮನ್ನೀಕೇರಿ, ಜಿ.ಪಂ. ಸಿಇಒ ಗರಿಮಾ ಪನ್ವಾರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಎಸ್. ಉಪಸ್ಥಿತರಿದ್ದರು.
ನೂತನ ವಸತಿ ಗೃಹಗಳ ಉದ್ಘಾಟನಾ ಸಮಾರಂಭದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬ ವರ್ಗದವರು ಭಾಗವಹಿಸಿದ್ದರು.


















