ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ 97 ಹುದ್ದೆಗಳ ಭರ್ತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 97 ಟ್ಯಾಕ್ಸ್ ಅಸಿಸ್ಟಂಟ್ ಹಾಗೂ ಸ್ಟೆನೊಗ್ರಾಫರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ (Income Tax Department Recruitment 2026) ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಆದಾಯ ತೆರಿಗೆ ಇಲಾಖೆ
ಹುದ್ದೆಗಳ ಹೆಸರು: ಟ್ಯಾಕ್ಸ್ ಅಸಿಸ್ಟಂಟ್ ಇತ್ಯಾದಿ
ಒಟ್ಟು ಹುದ್ದೆಗಳು: 97
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜನವರಿ 31
47 ಟ್ಯಾಕ್ಸ್ ಅಸಿಸ್ಟಂಟ್, 12 ಸ್ಟೆನೊಗ್ರಾಫರ್ ಗ್ರೇಡ್-2 ಹಾಗೂ 38 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 25 ಸಾವಿರ ರೂಪಾಯಿಯಿಂದ 81 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ incometaxmumbai.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಸಬ್ ಮಿಟ್ ಮಾಡಬೇಕು. ಮಹಾರಾಷ್ಟ್ರದ ಮುಂಬೈನಲ್ಲಿರುವ ಕಚೇರಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ; ಗ್ರಾಮ ಪಂಚಾಯಿತಿಗಳಲ್ಲಿ 9 ಬಿಲ್ ಕಲೆಕ್ಟರ್ಗಳ ನೇಮಕ | ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು



















