ಬೆಂಗಳೂರು: ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿರುವ ಆದಾಯ ತೆರಿಗೆ ಇಲಾಖೆಯ ಮುಖ್ಯ ಆಯುಕ್ತರ ಕಚೇರಿಯಲ್ಲಿ ಖಾಲಿ ಇರುವ 56 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎರಡೂ ರಾಜ್ಯಗಳಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರು ಇಂದೇ (ಏಪ್ರಿಲ್ 5) ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು www.incometaxhyderabad.gov.in. ವೆಬ್ ಪೋರ್ಟಲ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಯಾವ ಹುದ್ದೆಗಳು ಖಾಲಿ?
ಸ್ಟೆನೋಗ್ರಾಫರ್ ಗ್ರೇಡ್-2- 2
ಟ್ಯಾಕ್ಸ್ ಅಸಿಸ್ಟಂಟ್- 28
ಮಲ್ಟಿ ಟಾಸ್ಕಿಂಗ್ ಸ್ಟಾಫ್- 26
ವಿದ್ಯಾರ್ಹತೆ ಏನು?
ಅರ್ಜಿ ಸಲ್ಲಿಸಬಯಸುವ ಯಾವುದೇ ಅಭ್ಯರ್ಥಿಗಳು ಕನಿಷ್ಠ ಪದವಿ ಪಡೆದಿರಬೇಕು. ಅವರು ಕನಿಷ್ಠ 18 ರಿಂದ ಗರಿಷ್ಠ 27 ವರ್ಷದವರಾಗಿರಬೇಕು. ಎಸ್ ಎಸ್ ಎಲ್ ಸಿ ಉತ್ತೀರ್ಣ ಆದವರಿಗೂ ಇಲ್ಲಿ ಪೋಸ್ಟ್ ಖಾಲಿ ಇವೆ. ಆ ಅಭ್ಯರ್ಥಿಗೆ ಗರಿಷ್ಠ 25 ವರ್ಷ ವಯಸ್ಸಿನ ಮಿತಿ ನಿಗದಿಪಡಿಸಲಾಗಿದೆ. ಎಲ್ಲ ಹುದ್ದೆಗಳ ಆಯ್ಕೆಗೂ ಪ್ರತ್ಯೇಕ ವಿದ್ಯಾರ್ಹತೆ ಪರಿಗಣಿಸಲಾಗುತ್ತದೆ.
ಸಾಮಾನ್ಯ ಹಾಗೂ ಜನರಲ್ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 10 ವರ್ಷ ವಯಸ್ಸಿನ ಸಡಿಲಿಕೆ ಇದೆ. ಅಭ್ಯರ್ಥಿಗಳು ಸರ್ಕಾರಿ ಮಟ್ಟದಲ್ಲಿ ಉದ್ಯೋಗ ಹೊಂದಲು ಬಯಸಿದಲ್ಲಿ ಕೂಡಲೇ ಅರ್ಜಿ ಸಲ್ಲಿಸಬೇಕು. ಆಯ್ಕೆಯಾದವರಿಗೆ ಗರಿಷ್ಠ 81,100 ರೂಪಾಯಿ ಮಾಸಿಕ ವೇತನ ಇರಲಿದೆ. ಸ್ಟೆನೋಗ್ರಾಫರ್ ಗ್ರೇಡ್ II ಹಾಗೂ ತೆರಿಗೆ ಸಹಾಯಕ ಅಭ್ಯರ್ಥಿಗಳಿಗೆ ಮಾಸಿಕ 25,500 ರಿಂದ 81,100 ರೂಪಾಯಿ. ಮಲ್ಟಿ-ಟಾಸ್ಕಿಂಗ್ ಸ್ಟಾಫ್ ಹುದ್ದೆಗೆ ಆಯ್ಕೆಯಾದರೆ ಮಾಸಿಕ 18,000 ರಿಂದ ರೂ 56,900 ರೂಪಾಯಿ ನೀಡಲಾಗುತ್ತದೆ.